-
October 30, 2011 ಕೊಟ್ಟ ಕುದುರೆಯನೇರಲರಿಯದೆ
ಮತ್ತೊಂದು ಕುದುರೆಯ ಬಯಸುವರು
ವೀರರೂ ಅಲ್ಲ ಧೀರರೂ ಅಲ್ಲ
ಇದು ಕಾರಣ ನೆರೆ ಮೂರು ಲೋಕವೆಲ್ಲವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತ ಬಲ್ಲರೋ!
They are not heroes
who don’t know...
Read More
-
October 3, 2011 ಉಂಬ ಬಟ್ಟಲು ಬೇರೆ ಕಂಚಲ್ಲ
ನೋಡುವ ಕನ್ನಡಿ ಬೇರೆ ಕಂಚಲ್ಲ
ಭಾಂಡ ಒಂದೇ ಭಾಜನ ಒಂದೇ
ಬೆಳಗೇ ಕನ್ನಡಿ ಎನಿಸಿತ್ತಯ್ಯಾ
ಅರಿದಡೆ ಶರಣ ಮರೆದಡೆ ಮಾನವ
ಮರೆಯದೆ ಪೂಜಿಸು ಕೂಡಲ ಸಂಗನ
vessel to use...
Read More
-
October 2, 2011 ನೀರಿಂಗೆ ನೈದಿಲೆಯೆ ಶೃಂಗಾರ
ಸಮುದ್ರಕ್ಕೆ ತೆರೆಯೇ ಶೃಂಗಾರ
ನಾರಿಗೆ ಗುಣವೆ ಶೃಂಗಾರ
ಗಗನಕ್ಕೆ ಚಂದ್ರಮನೆ ಶೃಂಗಾರ
ನಮ್ಮ ಕೂಡಲಸಂಗನ ಶರಣರಿಗೆ
ನೊಸಲ ವಿಭೂತಿಯೆ ಶೃಂಗಾರ
To pond
lotus is the beauty,
To sea
waves are the...
Read More
-
March 31, 2010 ನರ ಕೂರಂಬಿನಲೆಚ್ಚ ಅವಂಗೊಲಿದೆಯಯ್ಯಾ
ಅರಳಂಬಿನಲೆಚ್ಚ ಕಾಮನನುರುಹಿದೆ
ಇರುಳು ಹಗಲೆನ್ನದೆ ಪ್ರಾಣಘಾತಕವ ಮಾಡಿದ
ಬೇಡನ ಕೈಲಾಸಕೊಯ್ದೆಯಯ್ಯಾ
ಎನ್ನನೇತಕೊಲ್ಲೆ ಕೂಡಲಸಂಗಮದೇವಾ?
You pleased with Arjuna
who hurt you severely with arrow,
but you burnt Manmatha
for...
Read More
-
March 31, 2010 ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲವಯ್ಯಾ
ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲವಯ್ಯಾ
ನಾದವ ನುಡಿಸಿದ ರಾವಳಂಗೆ ಅರೆಆಯುಷ್ಯವಾಯಿತ್ತು
ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು
ನಾದಪ್ರಿಯನೂ ಅಲ್ಲ ವೇದಪ್ರಿಯನೂ ಅಲ್ಲ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ.
No
God is not...
Read More
-
March 31, 2010 ಮೇರುಗುಣವನರಸುವುದೆ ಕಾಗೆಯಲ್ಲಿ?
ಪರುಷಗುಣವನರಸುವುದೆ ಕಬ್ಬುನದಲ್ಲಿ?
ಸಾಧುಗುಣವನರಸುವುದೆ ಅವಗುಣಿಯಲ್ಲಿ?
ಚಂದನಗುಣವನರಸುವುದೆ ತರುಗಳಲ್ಲಿ?
ಸರ್ವಗುಣ ಸಂಪನ್ನ ಲಿಂಗವೆ-
ನೀನೆನ್ನಲ್ಲಿ ಅವಗುಣನರಸುವುದೆ?
How can you expect
the noble qualities in crow?
How can you expect
touching stone in...
Read More
-
March 31, 2010 ಕಂಡ ಭಕ್ತರಿಗೆ ಕೈ ಮುಗಿವಾತನೆ ಭಕ್ತ
ಮೃದು ವಚನವೆ ಸಕಲ ಜಪಂಗಳಯ್ಯಾ
ಮೃದು ವಚನವೆ ಸಕಲ ತಪಂಗಳಯ್ಯಾ
ಸದುವಿನಯವೆ ಸದಾಶಿವನ ಒಲುಮೆಯಯ್ಯಾ
ಕೂಡಲಸಂಗಮದೇವನಂತಲ್ಲದೊಲ್ಲನಯ್ಯಾ.
The Devotee is one
who folds his hands and...
Read More
-
February 27, 2010 ಮಾರಿ ಮಸಣಿಯೆಂಬವು ಬೇರಿಲ್ಲ ಕಾಣಿರೋ
ಮಾರಿಯೆಂಬುದೇನು?
ಕಂಗಳು ತಪ್ಪಿ ನೋಡಿದರೆ ಮಾರಿ
ನಾಲಗೆ ತಪ್ಪಿ ನೋಡಿದರೆ ಮಾರಿ
ನಮ್ಮ ಕೂಡಲಸಂಗಮದೇವರ ನೆನಹ ಮರೆದರೆ ಮಾರಿ.
‘Mari’ and ‘Masani’ are nothing but
your eyes,...
Read More
-
February 27, 2010 ಛಲಬೇಕು ಶರಣಂಗೆ ಪರಧನವನೊಲ್ಲೆನೆಂಬ
ಛಲಬೇಕು ಶರಣಂಗೆ ಪರಸತಿಯನೊಲ್ಲೆನೆಂಬ
ಛಲಬೇಕು ಶರಣಂಗೆ ಪರದೈವವನೊಲ್ಲೆನೆಂಬ
ಛಲಬೇಕು ಶರಣಂಗೆ ಲಿಂಗಜಂಗಮವನೊಂದೆಂಬ
ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ
ಛಲವಿಲ್ಲದವರ ಮೆಚ್ಚ ಕೂಡಲಸಂಗಮದೇವಾ.
Sharana must have determination
not to touch wealth...
Read More
-
February 27, 2010 ಜ್ಞಾನದ ಬಲದಿಂದ ಅಜ್ಞಾನದ ಕೇಡ ನೋಡಯ್ಯಾ
ಜ್ಯೋತಿಯ ಬಲದಿಂದ ತಮಂಧದ ಕೇಡ ನೋಡಯ್ಯಾ
ಸತ್ಯದ ಬಲದಿಂದ ಅಸತ್ಯದ ಕೇಡ ನೋಡಯ್ಯಾ
ಪರುಷದ ಬಲದಿಂದ ಅವಲೋಹದ ಕೇಡ ನೋಡಯ್ಯಾ
ಕೂಡಲಸಂಗನ ಶರಣರ ಅನುಭಾವದಿಂದ
ಎನ್ನ ಭವದ...
Read More